Index   ವಚನ - 233    Search  
 
ಅಂಗದ ಮೇಲೆ ಲಿಂಗವಿಪ್ಪ ಶಿವಭಕ್ತನ ಕಂಡರೆ ಸಂಗಯ್ಯನ ಸಮವೆಂಬೆನಯ್ಯಾ. ಲಿಂಗವಿಲ್ಲದೆ ನಾಲ್ಕು ವೇದವನೋದುವ ವಿಪ್ರನಾದರೂ ಆಗಲಿ, ಹೊಲೆಮಾದಿಗರೇಳು ಜಾತಿಗಿಂತ ಕಡೆಯೆಂಬೆನಯ್ಯಾ. ತಾಯಿಲ್ಲದ ಮಕ್ಕಳಂತೆ, ಗಂಡನಿಲ್ಲದ ಮುಂಡೆಗೆ ಮುತ್ತೈದೆತನವುಂಟೇನಯ್ಯಾ? ಲಿಂಗವಿಲ್ಲದ ಭವಿ ಏನನೋದಿ ಏನ ಹಾಡಿದರೂ ವ್ಯರ್ಥ. ಸಾಕ್ಷಿ: “ಮಾತಾ ನಾಸ್ತಿ ಯಥಾ ಸುತಂ ಪತಿರ್ನಾಸ್ತಿ ಯಥಾ ನಾರೀ | ಲಿಂಗಂ ನಾಸ್ತಿ ಯಥಾ ಪ್ರಾಣಂ ತಸ್ಯ ಜನ್ಮ ನಿರರ್ಥಕಂ ||'' ಇಂತೆಂಬುದನರಿಯದೆ ವಾಗದ್ವೈತದಿಂದ ತನುಲಿಂಗ ಮನಲಿಂಗ ಪ್ರಾಣಲಿಂಗವೆಂಬ ಹೊಲೆಯರ ಮುಖವನೆನಗೊಮ್ಮೆ ತೋರದಿರಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.