Index   ವಚನ - 252    Search  
 
ಶೈವರು ಕಟ್ಟಿದ ಗುಡಿಯ ಹೊಗದ ಭಾಷೆ, ಶೈವರು ನಟ್ಟ ಲಿಂಗವ ಪೂಜಿಸದ ಭಾಷೆಯ ವಿವರವನೆನಗೆ ಪಾಲಿಸಯ್ಯಾ! ದೇಹದ ದೇವಾಲಯದ ಮಧ್ಯದಲ್ಲಿ ಭಾವಿಸುತಿಪ್ಪ ಶಿವಲಿಂಗದ ಗೊತ್ತಿನ ಸುಖದ ಪರಿಣಾಮದ ಭಕ್ತಿಯ ನಿರಾವಲಂಬವನೆನಗೆ ಕೃಪೆಮಾಡಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.