Index   ವಚನ - 284    Search  
 
ಜಪಿಸಿರೊ ಜಪಿಸಿರೊ ಶ್ರೀ ಪಂಚಾಕ್ಷರಿಯ. ಜಪದಿಂದ ರುದ್ರನಪ್ಪುದು ತಪ್ಪದು ನೋಡಾ! ಶ್ರೀ ಪಂಚಾಕ್ಷರಿಯನಿಂಬುಗೊಳದವನ ಅಂಗ ಹಾಳು. ಶ್ರೀ ಪಂಚಾಕ್ಷರಿಯ ನೆನೆಯದವ ಜಿಹ್ವೆ ಹೇಳು. ಶ್ರೀ ಪಂಚಾಕ್ಷರಿಯ ಕೇಳದವನ ಕರ್ಣ ಹಾಳು. ನಡೆವೆಡೆಯಲ್ಲಿ ನುಡಿವೆಡೆಯಲ್ಲಿ ಕೊಡುವೆಡೆಯಲ್ಲಿ ಕೊಂಬೆಡೆಯಲ್ಲಿ ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ಬಿಡದೆ ಪಂಚಾಕ್ಷರಿಯೆಂಬ ಮಂತ್ರವನೆ `ನಮಃ ಶಿವಾಯ' `ನಮಃ ಶಿವಾಯ' `ನಮಃ ಶಿವಾಯ'ಯೆಂದು ಜಪಿಸಿ, ಒಡಲ ದುಗುರ್ಣವ ಕೆಡಿಸಿ, ಮೃಡ ನಿಮ್ಮ ನೆನೆದು ನಾ ಬದುಕಿದೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.