Index   ವಚನ - 286    Search  
 
ಅಷ್ಟಾವರಣದಲ್ಲಿ ನೈಷ್ಠೆವಾರಿಯಾಗದನ್ನಕ್ಕರ ಭಕ್ತಿಸ್ಥಲವೆಂತು ಅಳವಡುವುದಯ್ಯಾ! ಅಷ್ಟಾವರಣದಲ್ಲಿ ನೈಷ್ಠೆವಾರಿಯಾಗದನ್ನಕ್ಕರ ಮಹೇಶ್ವರಸ್ಥಲವೆಂತು ಅಳವಡುವುದಯ್ಯಾ! ಅಷ್ಟಾವರಣದಲ್ಲಿ ನೈಷ್ಠೆವಾರಿಯಾಗದನ್ನಕ್ಕರ ಪ್ರಸಾದಿಸ್ಥಲವೆಂತು ಅಳವಡುವುದಯ್ಯಾ! ಅಷ್ಟಾವರಣದಲ್ಲಿ ನೈಷ್ಠೆವಾರಿಯಾಗದನ್ನಕ್ಕರ ಪ್ರಾಣಲಿಂಗಿಸ್ಥಲವೆಂತು ಅಳವಡುವುದಯ್ಯಾ! ಅಷ್ಟಾವರಣದಲ್ಲಿ ನೈಷ್ಠೆವಾರಿಯಾಗದನ್ನಕ್ಕರ ಶರಣಸ್ಥಲವೆಂತು ಅಳವಡುವುದಯ್ಯಾ! ಅಷ್ಟಾವರಣದಲ್ಲಿ ನೈಷ್ಠೆವಾರಿಯಾಗದನ್ನಕ್ಕರ ಐಕ್ಯಸ್ಥಲವೆಂತು ಅಳವಡುವುದಯ್ಯಾ! ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯಸ್ಥಲವೆಂಬ ಷಡುಸ್ಥಲಕ್ಕೆ ಅಷ್ಟಾವರಣವೆ ಮುಖ್ಯ ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.