Index   ವಚನ - 3    Search  
 
ಕೂಲಿ ಕೃಷಿ ಕಾಯಕಂಗಳಿಂದ ಮಾಡುವ ಗುರುಲಿಂಗಜಂಗಮದ ಸೇವೆ, ಅದಾವ ತೆರನೆಂದರಿದು, ಭಾವ ಶುದ್ಧವಾಗಿ ಮಾಡುವ ಸುಕಾಯಕವಂತನಿರವು ಎಂತುಟೆಂದಡೆ: ಮಾಡಿಕೊಂಡ ಕೃತ್ಯದಲ್ಲಿ ಆರಿಗೂ ಒಡಲೆಡೆಗೂಡದೆ, ಕೊಂಡುದು ಪ್ರಸಾದ, ನಿಂದುದು ಸಯಿದಾನವೆನ್ನದೆ, ಉಭಯ ಪ್ರತಿಪಾಕದಲ್ಲಿ ಆದ ಸಯಿದಾನಕ್ಕೆ ಸಂಕಲ್ಪವಳಿದು, ಉಭಯಭಾಂಡವೂ ಸರಿಯೆಂದ ಪ್ರಸಾದಿಗೆ ಪ್ರಸಾದವ ಎಡೆಮಾಡಬೇಕು. ಅದು ನಿರ್ಮಾಲ್ಯವಲ್ಲ, ಅದು ಲಿಂಗಾಂಗ, ಕುಂಭದಲ್ಲಿ ನಿಂದಪ್ರಸಾದ. ಇದರ ಸಂದೇಹವ ಹರಿದು ಕೊಂಬ ನಿರಂಗಪ್ರಸಾದಿಗೆ ಕುಂಭೇಶ್ವರಲಿಂಗದಲ್ಲಿದ್ದ ಜಗನ್ನಾಥ ಸಾಕ್ಷಿಯಾಗಿ ನಮೋ ನಮೋ ಎನುತಿದ್ದೆನು.