Index   ವಚನ - 7    Search  
 
ಬಹುಜನಂಗಳೆಲ್ಲಾ ಓಲಗವಿಲ್ಲ ಹೋಗಿ, ಸಲಿಗೆವಂತರಲ್ಲಿಲ್ಲ ನಿಲ್ಲಿ. ಏಕಾಂತ ಸಂಬಂಧರು ಹೋಗಿ, ಲೋಕಾಂತ ಭಂಡರು ನಿಲ್ಲಿ. ಇಂತೀ ಅವರವರ ಸ್ವಸ್ಥಾನಂಗಳ ಸಲುಗೆಯನರಿದುಬಿಡುತ್ತಿದ್ದೇನೆ, ಕೂಡಲಸಂಗಮದೇವರಲ್ಲಿ ಬಸವಣ್ಣನ ಕಾಲವೇಳೆಯನರಿದು.