Index   ವಚನ - 9    Search  
 
ಮರನುರಿದು ಬೆಂದು ಕರಿಯಾದ ಮತ್ತೆ ಉರಿಗೊಡಲಾದುದ ಕಂಡು, ಆತ್ಮ ಪರಿಭವಕ್ಕೆ ಬಪ್ಪುದಕ್ಕೆ ಇದೆ ದೃಷ್ಟ. ಕರಿ ಭಸ್ಮವಾದ ಮತ್ತೆ ಉರಿಗೊಡಲಿಲ್ಲ, ಅರಿಕೆ ನಿಂದಲ್ಲಿ ಆತ್ಮ ಪರಿಭವಕ್ಕೆ ಬರಲಿಲ್ಲ, ಉರಿಯೊಳಗೊಡಗೂಡಿದ ತಿಲಸಾರ ತುಪ್ಪ ಮರಳಿ ಅಳೆತಕ್ಕುಂಟೆ? ವಸ್ತುವಿನಲ್ಲಿ ಕರಿಗೊಂಡ ಚಿತ್ತ, ತ್ರಿವಿಧಮಲಕ್ಕೆ ಹೊರಳಿ ಮರಳುವದೆ? ಈ ಗುಣ ನಡೆ ನುಡಿ ಸಿದ್ಧಾಂತವಾದವನ ಇರವು, ಗಾರುಡೇಶ್ವರಲಿಂಗವ ಕೂಡಿದವನ ಕೂಟ.