Index   ವಚನ - 35    Search  
 
ನಲ್ಲನ ರೂಪೆನ್ನ ನೇತ್ರವ ತುಂಬಿತ್ತು, ನಲ್ಲನ ನುಡಿಯೆನ್ನ ಶ್ರೋತ್ರವ ತುಂಬಿತ್ತು, ನಲ್ಲನ ಸುಗಂಧವೆನ್ನ ಘ್ರಾಣವ ತುಂಬಿತ್ತು, ನಲ್ಲನ ಚುಂಬನವೆನ್ನ ಜಿಹ್ವೆಯ ತುಂಬಿತ್ತು, ನಲ್ಲನ ಆಲಿಂಗವೆನ್ನ ಅಂತರಂಗ ಬಹಿರಂಗದಲ್ಲಿ, ನಲ್ಲನ ಪ್ರೇಮವೆನ್ನ ಮನವ ತುಂಬಿತ್ತು, ಕೂಡಿ ಸುಖಿಯಾದೆ ಉರಿಲಿಂಗದೇವನ.