Index   ವಚನ - 3    Search  
 
ಅಂಗಭಾವ ಹಿಂಗದೆ ಮಜ್ಜನಕ್ಕೆರೆವಿರಿ, ಅರ್ಪಿತವನರಿಯದೆ ಅರ್ಪಿಸುವಿರಿ. ಅರ್ಪಿತ ಸವೆಯಿತ್ತೆ? ಲಿಂಗ ಸವೆಯಿತ್ತೆ? ಕರ್ಮಣಾ ಮನಸಾ ವಾಚಾ ಗುರೂಣಾಂ ಭಕ್ತಿವತ್ಸಲ| ಶರೀರಮರ್ಥಂ ಪ್ರಾಣಂ ಚ ಸದ್ಗುರುಭ್ಯೋ ನಿವೇದಯೇತ್|| ಇಂತೆಂದುದಾಗಿ, ತನುವರ್ಪಿತ ಗುರುವಿಂಗೆ, ಮನವರ್ಪಿತ ಲಿಂಗಕ್ಕೆ, ಧನವರ್ಪಿತ ಜಂಗಮಕ್ಕೆ. ಇಂತೀ ತ್ರಿವಿಧಕ್ಕೆ ಅರಿದರ್ಪಿಸಬಲ್ಲಡೆ ಅರ್ಪಿತ. ಈ ತ್ರಿವಿಧ ಸವೆಯದೆ ಅರ್ಪಿಸುವ ಅರ್ಪಿತವೆಂತೊ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ?