Index   ವಚನ - 8    Search  
 
ಅಂತ್ಯಜನಾಗಲಿ, ಅಗ್ರಜನಾಗಲಿ ಮೂರ್ಖನಾಗಲಿ, ಪಂಡಿತನಾಗಲಿ ಜಪಿಸುವುದು ಶ್ರೀ ಪಂಚಾಕ್ಷರಿಯ. ಆ ಜಪದಿಂದ ರುದ್ರನಪ್ಪುದು ತಪ್ಪದು. ಅದೆಂತೆಂದಡೆ:ಲೈಂಗೇ 'ಅಂತ್ಯಜೋಪ್ಯಗ್ರಜೋ ವಾಪಿ ಮೂರ್ಖೋ ವಾ ಪಂಡಿತೋಪಿ ವಾ ಪಂಚಾಕ್ಷರೀಂ ಜಪೇನ್ನಿತ್ಯಂ ಸ ರುದ್ರೋ ನಾತ್ರ ಸಂಶಯಃ ಇಂತೆಂದುದಾಗಿ, ಇದು ಸತ್ಯ, ಇದು ಸತ್ಯ, ಇದು ಸತ್ಯ ಜಪಿಸುವುದು, ಶಪಥವ ಮಾಡಿದೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.