ಅಕಟಕಟಾ ! ಬೆಡಗು ಬಿನ್ನಾಣ ಒಂದೇ ನೋಡಾ.
ಓಂ ನಮಃ ಶಿವಾಯ ಓಂ ನಮಃ ಶಿವಾಯ
ಓಂ ನಮಃ ಶಿವಾಯ ಎಂಬುದೆ ಯಂತ್ರ.
ಓಂ ನಮಃ ಶಿವಾಯ ಓಂ ನಮಃ ಶಿವಾಯ
ಓಂ ನಮಃ ಶಿವಾಯ ಎಂಬುದೆ ತಂತ್ರ.
ಓಂ ನಮಃ ಶಿವಾಯ ಓಂ ನಮಃ ಶಿವಾಯ
ಓಂ ನಮಃ ಶಿವಾಯ ಎಂಬುದೆ ಮಂತ್ರ.
ಪ್ರಣಮಪಂಚಾಕ್ಷರಿಯ ಮಂತ್ರವನುಚ್ಚರಿಸುವರೆಲ್ಲರೂ
ಅಪ್ರಮಾಣಿಕರು ನೋಡಾ,
ಅಪ್ರಣಮ ಪಂಚಾಕ್ಷರ ಮಂತ್ರವ ವಿಶ್ವಾಸದಿಂದವಗ್ರಹಿಸಿ
ಮಂತ್ರಾರ್ಥವ ತಿಳಿದು ಉಚ್ಚರಿಸಲರಿಯದ ಕಾರಣ,
ಮತ್ತೆ ಆಕಾರ ಉಕಾರ ಮಕಾರದ ಮೂಲವಂ ಭೇದಿಸಿ,
ಓಂಕಾರದ ನೆಲೆಯಂ ತಿಳಿದು,
ಆ ಓಂಕಾರದಲ್ಲಿ ಪಂಚವರ್ಣದ ಲಕ್ಷಣವನರಿದು,
ಓಂ ನಮಃ ಶಿವಾಯ,
ಓಂ ನಮಃ ಶಿವಾಯ, ಓಂ ನಮಃ ಶಿವಾಯ
ಎಂದು ಸ್ಮರಿಸಬಲ್ಲಡೆ ಇದೆ ಜಪ,
ಇದೇ ತಪ, ಇದೇ ಸರ್ವಸಿದ್ಧಿಯಯ್ಯಾ
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.