Index   ವಚನ - 23    Search  
 
ಅಯ್ಯಾ, ನೀನು ತತ್ತ್ವಂಗಳ ಮರೆಗೊಂಡಿರ್ಪನ್ನಕ್ಕ, ನಾನು ಕಾಯವ ಮರೆಗೊಂಡಿರ್ದೆನಯ್ಯಾ. ಅಯ್ಯಾ, ನೀನು ಶಕ್ತಿಯ ಮರೆಗೊಂಡಿರ್ಪನ್ನಕ್ಕ, ನಾನು ಆಸೆಯ ಮರೆಯಲ್ಲಿರ್ದೆನಯ್ಯಾ. ನಿನ್ನ ಬೆಡಗು ಬಿನ್ನಾಣವ ನಾ ಬಲ್ಲೆ, ನನ್ನ ಬೆಡಗು ಬಿನ್ನಾಣವ ನೀ ಬಲ್ಲೆ. ಮರೆಗೆ ಮರೆಯನೊಡ್ಡಿ ಜಾರಿ ಹೋದೆಯಲ್ಲಾ. ಈ ಬಿನ್ನಾಣದ ಮರೆಯನು ತೆರೆದು ದರ್ಶನಂ ಮಾಡಿ, ನಿನ್ನೊಳಗೆ ಎನ್ನನಿರಿಸಿ, ಎನ್ನೊಳಗೆ ನಿನ್ನನಿರಿಸಿ, ಪ್ರಾಣ ಪ್ರಾಣವ ಸಂಯೋಗವ ಮಾಡಿದೆನು ಶ್ರೀಗುರು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.