Index   ವಚನ - 27    Search  
 
ಅರಿದಡೆ ಆತ್ಮನಲ್ಲ, ಅರಿಯದಿದ್ದಡೆ ಆತ್ಮನಲ್ಲ. ತೋರಿತ್ತಾದಡೆ ವಿಷಯ, ತೋರದಿದ್ದಡೆ ಶೂನ್ಯವೆನಿಸುಗು, ಬೊಮ್ಮದ ಅರಿವಿನ್ನೆಲ್ಲಿಯದೊ? ಅರಿವು ತಾನರಿವಾಗಿದ್ದು, ಸ್ವಾನುಭಾವದ ಹೊರೆಯಲ್ಲಿದ್ದು, ಸನ್ನಿಧಿ, ನಿತ್ಯನಿಜಾನಂದಾತ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನೆಂದರಿವುದು.