Index   ವಚನ - 29    Search  
 
ಅರಿದು ಮಾಡದ ಭಕ್ತಿ ಭವಕ್ಕೆ ತಂದಿತ್ತು. ಅದೆಂತೆಂದಡೆ, ಫಲಭೋಗಂಗಳ ಬಯಸುವನಾಗಿ ಫಲವನುಂಡು ಮರಳಿ ಭವಕ್ಕೆ ಬಹನಾಗಿ. ಇದು ಕಾರಣ, ಅರಿದು ಮುಕ್ತಿಯ ಹಡೆವಡೆ ಅನುಭವವೇ ಬೇಕು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.