Index   ವಚನ - 60    Search  
 
ಎಂಬತ್ತುನಾಲ್ಕು ಲಕ್ಷ ಯೋನಿಯೊಳು ಜನಿಸುವ ಜನನವೆಲ್ಲರಿಗೆಯು. ಆ ಜನ್ಮಾಂತರದ ಯೋನಿಗಳೊಳು ಜನಿಸದಾತನೆ ಯೋಗಿ. ಆ ಯೋಗಿ ಜನ್ಮಾಂತರ ಕಳೆದಹನು, ಹೇಗೆಂದಡೆ: ಶ್ರೀ ಗುರುಕರಪಲ್ಲವದಿಂದ ಬೆಸಲಾಯಿತ್ತಾಗಿ 'ನ ಮುಕ್ತಿರ್ನ ಚ ಧರ್ಮಶ್ಚ ನ ಪುಣ್ಯಂ ಚ ನ ಪಾಪಕಂ ನ ಕರ್ಮಜನ್ಮ ನೇಚ್ಛಾ ವೈ ಗುರೋಃ ಪಾದನಿರೀಕ್ಷಣಾತ್' ಎಂದುದಾಗಿ, ಇಂತು ಯೋನಿಜನ್ಮಾಂತರವ ಕಳೆದ ಶರಣಂಗೆ ಮತ್ತೆ ಭವಮಾಲೆಯುಂಟೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.