Index   ವಚನ - 81    Search  
 
ಓಂಕಾರ ಬಿಂದು ಸಂಯುಕ್ತಂ ನಿತ್ಯಂ ಧ್ಯಾಯಂತಿ ಯೋಗಿಯಃ ಕಾಮದಂ ಮೋಕ್ಷದಂ ಚೈವ ಓಂಕಾರಾಯ ನಮೋ ನಮಃ ನಮಂತಿ ಋಷಯೋ ದೇವಾ ನಮಂತ್ಯಪ್ಸರಸಾಂಗಣಾಃ ನಮಂತಿ ದೇವಾ ದೇವೇಶಂ `ನ' ಕಾರಾಯ ನಮೋ ನಮಃ ಮಹಾದೇವಂ ಮಹಾತ್ಮಾನಂ ಮಹಾಜ್ಞಾನಪರಾಯಣಂ ಮಹಾಪಾಪ ಹರಂ ನಿತ್ಯಂ `ಮ' ಕಾರಾಯ ನಮೋ ನಮಃ ಶಿವಂ ಶಾಂತಧರಂ ದೇವಂ ಲೋಕಾನುಗ್ರಹ ಕಾರಣಂ ಶಿವಮೇಕಂ ಪರಬ್ರಹ್ಮ `ಶಿ'ಕಾರಾಯ ನಮೋ ನಮಃ ವಾಹನಂ ವೃಷಭೋ ಯಸ್ಯ ವಾಸುಕಿಃ ಕಂಠಭೂಷಣಂ ವಾಮಶಕ್ತಿಧರಂ ದೇವಂ `ವ'ಕಾರಾಯ ನಮೋ ನಮಃ ಯತ್ರ ಯತ್ರ ಸ್ಥಿತೋ ದೇವಃ ಸರ್ವವ್ಯಾಪಿ ಮಹೇಶ್ವರಃ ಯೋ ಗುರುಃ ಸರ್ವದೇವಾನಾಂ `ಯ'ಕಾರಾಯ ನಮೋ ನಮಃ' ವೇದ: ನಕಾರಾಯ ಮಕಾರಾಯ ಶಿಕಾರಾಯ ತಥೈವ ಚ ವಕಾರಾಯ ಯಕಾರಾಯ ಓಂಕಾರಾಯ ನಮೋ ನಮಃ ವೇದಮಾತಾ ಚ ಗಾಯಿತ್ರೀ ಮಂತ್ರಮಾತಾ ಷಡಕ್ಷರೀ ಸರ್ವದೇವಪಿತಾ ಶಂಭುಃ ಭರ್ಗೋ ದೇವಸ್ಯ ಧೀಮಹಿ ಷಡಕ್ಷರಮಿದಂ ಪುಣ್ಯಂ ಯಃ ಪಠೀತ್ ಶಿವಸನ್ನಿದೌ ಶಿವಲೋಕಮವಾಪ್ನೋತಿ ಶಿವೇನ ಸಹ ಮೋದತೆ ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎನ್ನದಿರ್ದಡೆ ಭವಬಂಧನ ಇಹಪರ ಸಂಸಾರಾದಿ ಪ್ರಪಂಚಬಂಧನ ಬಿಡದು. ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂದಡೆ ಮೋಕ್ಷಸಿದ್ಧಿ. ಸಾಕ್ಷಿ: ಷಡಕ್ಷರಜಪಾನ್ನಾಸ್ತಿ ಸರ್ವೇಷಾಂ ಬಂಧನಂ ತಥಾ ತನ್ಮಂತ್ರಂ ಚ ಜಪನ್ ಭಕ್ತ್ಯಾ ಸದ್ಯೋ ಮುಕ್ತೋ ನ ಸಂಶಯಃ ಎಂಬುದಾಗಿ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯ ಬಂದು ಮೋಕ್ಷ ತಾನೇ ಓಂ ನಮಃ ಶಿವಾಯ.