Index   ವಚನ - 86    Search  
 
ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂಬುದೆ ಛಂದ. ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂಬುದೆ ಋಷಿ ತಾನು. ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂಬುದೆ ಅಧಿದೇವತೆ. ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂದೆನಲು ಸದ್ಯೋನ್ಮುಕ್ತಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.