Index   ವಚನ - 88    Search  
 
ಕರಸ್ಥಲದಲ್ಲಿ ಶಿವಲಿಂಗವ ಬಿಜಯಂಗೈಸಿಕೊಂಡು ಕಣ್ಣ ಮುಚ್ಚಿ, ಬಾಯ ತೆರೆದು, ಅನ್ಯವ ನೆನೆವನ್ನಬರ ಇನ್ನು ಲಿಂಗದ ಮರ್ಮವನರಿದುದಿಲ್ಲ. ಉಂಟಾದುದ ಹುಸಿಮಾಡಿ, ಇಲ್ಲದುದ ನೆನೆದಡೆ ಅದು ಸಹಜವಾಗಬಲ್ಲುದೆ? ದೇವದೇಹಿಕ ಭಕ್ತ, ಭಕ್ತದೇಹಿಕ ದೇವನೆಂದುದಾಗಿ, ತನ್ನೊಳಗೆ ಲಿಂಗ, ಲಿಂಗದೊಳಗೆ ತಾನು, ನೆನೆಯಲಿಲ್ಲ, ನೆನೆಯಿಸಿಕೊಳ್ಳಲಿಲ್ಲವಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.