Index   ವಚನ - 96    Search  
 
ಕಾಮಿಸುವ ವಸ್ತು ಕರಸ್ಥಲಕ್ಕೆ ಬಂದ ಬಳಿಕ ಕಾಮಿಸಲೇನುಂಟು? ಇನ್ನೇನ ಕಾಮಿಸುವುದಯ್ಯಾ? ನಮೋ ಹಿರಣ್ಯಬಾಹವೇ ಸೇನಾನ್ಯೇ ದಿಶಾಂ ಚ ಪತಯೇ ನಮೋ ನಮೋ ವೃಕ್ಷೇಭ್ಯೋ ಹರಿಕೇಶೇಭ್ಯಃ ಪಶೂನಾಂ ಪತಯೇ ನಮೋ ಎಂಬ ವಸ್ತು ``ಓಂ ಯೋ ವೈ ರುದ್ರಸ್ವಭಾವಾನ್ ಅನ್ಯಚ್ಚ ಮೃತಂ ಎಂಬ ವಸ್ತು, ಸುಖಸ್ವರೂಪನು ಅಭಯಹಸ್ತನು ಶಾಂತನು ಕರುಣಿ ಉರಿಲಿಂಗಪೆದ್ದಿಪ್ರಿಯವಿಶ್ವೇಶ್ವರಾ.