Index   ವಚನ - 116    Search  
 
ಜಗವೊಂದೆಸೆ, ತಾನೊಂದೆಸೆ, ಮತ್ತಾ ಜಗದೊಳಗೆ ತಾ, ತನ್ನೊಳಗೆ ಜಗ. ಆಗಮವೊಂದೆಸೆ, ತಾನೊಂದೆಸೆ, ಮತ್ತಾ ಆಗಮದೊಳಗೆ ತಾ, ತನ್ನೊಳಗೆ ಆಗಮ. ವಿಧಿಯೊಂದೆಸೆ, ತಾನೊಂದೆಸೆ, ಮತ್ತಾ ವಿಧಿಯೊಳಗೆ ತಾ, ತನ್ನೊಳಗೆ ವಿಧಿ. ಕ್ರೀಯೊಂದೆಸೆ, ತಾನೊಂದೆಸೆ, ಮತ್ತಾ ಕ್ರೀಯೊಳಗೆ ತಾ, ತನ್ನೊಳಗೆ ಕ್ರೀ. ಇಂತೀ ಜಗ, ಆಗಮ, ವಿಧಿ, ಕ್ರೀ ನಿಷೇಧವಾಗಿ, ಹೊದ್ದಿಯೂ ಹೊದ್ದನು, ನೀರ ತಾವರೆಯಂತೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.