Index   ವಚನ - 120    Search  
 
ಜನಿತವಿಲ್ಲದೆ ಜನಿಸಿ ಸ್ವಯವಾದ ಹರನೇ ನೀನು ನಿರೂಪನೇ ಜನಿಸಿ ಜನಿತವ ಬಗೆಯರಾಗಿ ಎಮ್ಮ ಪುರಾತನರೇ ನಿರೂಪರು, ಕುಲದಲ್ಲಿ ಹುಟ್ಟಿ ಕುಲವ ಬೆರೆಸರಾಗಿ ಎಮ್ಮ ಪುರಾತನರೇ ಕುಲಜರು. ಆದಿಲಿಂಗ ಅನಾದಿಶರಣ. ಹೆಸರಿಲ್ಲದ ದೆಶೆಗೇಡಿ ಲಿಂಗವ ವಶಕ್ಕೆ ತಂದು ಹೆಸರಿಟ್ಟು ಕರೆದರೆ ನೀನು ಸುಲಭನೇ? ಅಲ್ಲ. ನೀನು ಕುಲಗೇಡಿ, ನಿನ್ನನಾರು ಬಲ್ಲರು? ನೀನಗೋಚರ. ಹರನೇ, ನೀ ಬೇಡಿತ್ತ ಕೊಟ್ಟು ನೀ ಬಂದರೆ ನಿನ್ನನಾಗುಮಾಡಿದರಲ್ಲದೆ ಎಮ್ಮ ಪುರಾತನರು ನಿಮ್ಮಲ್ಲಿಗೆ ಬಂದು ದೈನ್ಯಬಟ್ಟು ಬೇಡಿದರಲ್ಲೈ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.