Index   ವಚನ - 134    Search  
 
ತನು ತನ್ನದಾದಡೆ, ದಾಸೋಹಕ್ಕೆ ಕೊರತೆಯಿಲ್ಲ, ದಾಸೋಹ ಸಂಪೂರ್ಣ, ದಾಸೋಹವೇ ಮುಕ್ತಿ. ಮನ ತನ್ನದಾದಡೆ, ಜ್ಞಾನಕ್ಕೆ ಕೊರತೆಯಿಲ್ಲ ಜ್ಞಾನ ಸಂಪೂರ್ಣ, ಆ ಜ್ಞಾನವೇ ಮುಕ್ತಿ. ಧನ ತನ್ನದಾದಡೆ, ಭಕ್ತಿಗೆ ಕೊರತೆಯಿಲ್ಲ. ಭಕ್ತಿ ಸಂಪೂರ್ಣ, ಭಕ್ತಿಯಲ್ಲಿ ಮುಕ್ತಿ. ತನುಮನಧನವೊಂದಾಗಿ ತನ್ನದಾದಡೆ ಗುರುಲಿಂಗಜಂಗಮವೊಂದೆಯಾಗಿ ತಾನಿಪ್ಪನು ಬೇರೆ ಮುಕ್ತಿ ಎಂತಪ್ಪುದಯ್ಯಾ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.