Index   ವಚನ - 181    Search  
 
ಪ್ರಣವವೆ ಸರ್ವವರ್ಣಂಗಳ ಕಾರ್ಯಕಾರಣವ್ಯಾಪ್ತಿ ಮೂಲವು, ಪ್ರಣವವೆ ಸರ್ವದೇವತಾಮಯವು, ಪ್ರಣವವೆ ಸರ್ವಮಂತ್ರಗಳೆಲ್ಲವಕ್ಕೂ ಪ್ರಾಣಕಳೆ. ಪ್ರಣವವೆ ಸರ್ವದೇವತಾಮಯ ಎಂದುದಾಗಿ ಸದ್ಗುರುವಿನುಪದೇಶದಿಂದವು ಪ್ರಣವಾಧಿಕವಪ್ಪ ಮಹಾಮಂತ್ರವ ಜಪಿಸುವ ಸದ್ಭಕ್ತನೆ ದೈವಜ್ಞನು, ಮಂತ್ರಜ್ಞನು. ಇಂತಪ್ಪ ಸದ್ಭಕ್ತದೇಹಿಕದೇವನಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.