Index   ವಚನ - 225    Search  
 
ಯೋಗಾಭ್ಯಾಸ ಯೋಗಾಭ್ಯಾಸವೆಂದೆಂಬಿರಿ, ಯೋಗವು ಅಭ್ಯಾಸವೆ? ಅಭ್ಯಾಸವು ಯೋಗವೆ ಅಯ್ಯಾ? ಯೋಗಾಭ್ಯಾಸವೆಂಬನ್ನಕ್ಕ ತಾನಾ ಯೋಗಿಯೆ ಅಯ್ಯಾ? ಯೋಗವ ನುಡಿವರೆ ಅಯ್ಯಾ? ಗುರುಮತದಿಂ ಭಾವಿಸಲು ಸರ್ವವೂ ಪರಬ್ರಹ್ಮ, ಶ್ರೀಗುರುವಿನ ಶ್ರೀಪಾದಧ್ಯಾನವೇ ಯೋಗ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.