ಲಿಂಗ ಪ್ರಾಣ, ಪ್ರಾಣ ಲಿಂಗ,
ಆ ಮಹಾಲಿಂಗಕ್ಕೆ ಕಾಯವೆ ಭಕ್ತನು,
`ಭಕ್ತಕಾಯ ಮಮಕಾಯ' ಎಂದುದಾಗಿ
ಆ ಪ್ರಾಣ ಲಿಂಗವು, ಕಾಯ ಭಕ್ತನು
ಆ ಲಿಂಗಕ್ಕೆ ಆ ಭಕ್ತನು ದಾಸೋಹವ ಮಾಡಿದಡೆ
ಭಿನ್ನ ಭೇದವೆ? ಅಲ್ಲ, ಸ್ವಭಾವ ನೈಜ.
ಅಂಗಕ್ರೀಯೆಲ್ಲ ಲಿಂಗಕ್ರೀ, ಲಿಂಗಕ್ರೀಯೆಲ್ಲ ಅಂಗಕ್ರೀ.
ಕೈಕಲಸಿದಡೆ ಬಾಯಿಗೆ, ಹಾಂಗೆ ಸರ್ವಾಂಗ ಲಿಂಗಕ್ಕೆ
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.