Index   ವಚನ - 241    Search  
 
ಲಿಂಗವಂತನು ಕೇವಲ ಲಿಂಗಮೂರ್ತಿ. ಲಿಂಗಾರ್ಚನೆಯಂ ಮಾಡಿ, ಲಿಂಗಪ್ರಸಾದವ ಧರಿಸಿ, ಲಿಂಗವಂತರಲ್ಲಿ ವರ್ತಿಸಿ, ಸರ್ವವೂ ಲಿಂಗಕ್ರೀಯಾಗಿದ್ದು ಲಿಂಗವಿಲ್ಲದವರಲ್ಲಿ ಧನದ ಕೊಳುಕೊಡೆ ಮನದ ಕೊಳುಕೊಡೆ ತನುವಿನ ಕೊಳುಕೊಡೆಯನೂ ಮಾಡಿದಡೆ ನಾಚದೆ ಶಿವಾಚಾರ? ನಾಚದೇ ಪ್ರಸಾದ? ನಾಚರೆ ಲಿಂಗವಂತರು. ಸುಡು, ಸುಡು, ಕಡು ಕಷ್ಟ, ಅವರನು ಬಿಡು ಬಿಡು. ಆ ತನುವನು ಲಿಂಗವಂತರಲ್ಲಿಯೇ ಸರ್ವಕ್ರೀಯ ಅರ್ತಿಸುವುದು. ತನಗೆ ಇಚ್ಛೈಸಿತ್ತ ಕೊಂಡು ಕೊಂಬುದು, ಅವರು ಇಚ್ಛೈಸಿತ್ತ ಕೊಡುವುದು, ಅವರಲ್ಲಿಯೆ ಅನುಭವವನಾಸೆಗೈವುದು. ಅನ್ಯರ ವಿಚಾರದಲ್ಲಿ ನಡೆದು ನರಕಕ್ಕಿಳಿಯಲಾಗದು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.