Index   ವಚನ - 243    Search  
 
ಲಿಂಗವಂತನು ಲಿಂಗವಂತರಲ್ಲಿಯೇ ಸಂಗವ ಮಾಡುವುದು, ಲಿಂಗಬಾಹ್ಯರ ಸಂಗವ ಮಾಡಲಾಗದು. ಸ್ತ್ರೀ ಪುತ್ರರು ಮೊದಲಾದವರ ಕೂಡ ಲಿಂಗವಿಲ್ಲದವರೊಡನೆ ಸಂಗವ ಮಾಡಲಾಗದು. ಅದೆಂತೆಂದೆಡೆ : ಶಿವಲಿಂಗಾಂಗಸಂಪನ್ನೋ ಲಿಂಗಬಾಹ್ಯಸತೀಸುತಾನ್ ಆಲಿಂಗ್ಯ ಚುಂಬನಂ ಕೃತ್ವಾ ರೌರವಂ ನರಕಂ ವ್ರಜೇತ್' ಎಂದುದಾಗಿ ಮತ್ತೆಯೂ_ ಲಿಂಗೀ ಲಿಂಗಿ ಸಹಾವಾಸೀ ಲಿಂಗಿನಾ ಸಹ ವರ್ತಯೇತ್ ಲಿಂಗಿನಾ ಸಹ ಭುಂಜಿತ ಲಿಂಗಯೋಗೋ ನ ಸಂಶಯಃ' ಎಂದುದಾಗಿ ಲಿಂಗವಂತನು ಲಿಂಗವಂತರಲ್ಲಿಯೇ ಸಂಗವ ಮಾಡುವುದು ಶಿವಪಥವಯ್ಯಾ. ಲಿಂಗವಿಲ್ಲದವರೊಡನೆ ಸಂಗವ ಮಾಡುವುದು ಮಹಾಪಾತಕವಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.