Index   ವಚನ - 245    Search  
 
ಲಿಂಗವಂತನು ಲಿಂಗವಿಲ್ಲದವರ ಬಯಸಿದಡೆ ಆತಂಗೆ ಲಿಂಗವಿಲ್ಲ, ಲಿಂಗವಿಲ್ಲದವನು ಆರಿಗೂ ಬಾತೆ ಅಲ್ಲ. ಬಾತೆ ಅಲ್ಲದವಂಗೆ ಆರೂ ಸ್ನೇಹಿಸರು, ಆರು ಏನನೂ ಕೊಡರು. ಇದು ಕಾರಣ, ದುರಾಶೆಯಂ ಬಿಟ್ಟು ನಿರಾಶೆಯಾಗಿ ಲಿಂಗವನಾಶ್ರೈಸಿದಡೆ ಪ್ರಸಾದವಪ್ಪುದು ಪ್ರಸಾದದಿಂದಿಹಪರ ಸಿದ್ಧಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.