Index   ವಚನ - 252    Search  
 
ಲಿಂಗವನರಿದ ಲಿಂಗವಂತನು ಸರ್ವಾಂಗಲಿಂಗಮೂರ್ತಿ. ಆತನ ನುಡಿಯೆ ವೇದ, ಆತನ ನಡೆಯೆ ಶಾಸ್ತ್ರ ಪುರಾಣ ಆಗಮ ಚರಿತ್ರವು. ಆ ಮಹಾಮಹಿಮನ ನುಡಿಯಲ್ಲಿ ತರ್ಕವ ಮಾಡಲಾಗದು. ನಡೆಯಲ್ಲಿ ನಾಸ್ತಿಕವ ಮಾಡಿದಡೆ ನರಕ ತಪ್ಪದಯ್ಯಾ. ಲಿಂಗವನರಿದ ಮಹಾಮಹಿಮಂಗೆ ನಮೋ ನಮೋ ಎಂಬೆನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.