Index   ವಚನ - 276    Search  
 
ವೇದಶಾಸ್ತ್ರಪುರಾಣಾಗಮಗ್ರಂಥಂಗಳ ನೋಡಿದವರೆಲ್ಲರೇನು ಹಿರಿಯರೆಂಬೆನೆ? ಅಲ್ಲಲ್ಲ, ನಿಲ್ಲು, ಮಾಣು. ಅವರೇ ಹಿರಿಯರಾದಡೆ, ನಟ್ಟು[ವೆ], ಗಳೆಯಾಟ, ಮಿಣಿಯಾಟ, ಅದೃಶ್ಯಕರಣ, ಅಗ್ನಿಸ್ತಂಭ, ಆಕರ್ಷಣ, ಚೌಷಷ್ಠಿಕಲಾವಿದ್ಯೆಯ ಸಾಧಿಸಿದ ಡೊಂಬನೇನು ಕಿರಿಯನೇ? ಇದು ಹಿರಿದು ಕಿರಿದಿನ ಪರಿಯಲ್ಲ. ಹಿರಿದು ಕಿರಿದಿನ ಪರಿ ಬೇರೆ ಕಾಣಿರಣ್ಣಾ. ಇದು ಉದರಪೋಷಣವಿದ್ಯೆ ಎನಿಸುವುದು. ಅವರನೆಂತು ಸರಿ ಎಂಬೆನಯ್ಯ, ಲಿಂಗವಂತಂಗೆ? ಇದು ಕಾರಣ, ಗುಣ, ಜ್ಞಾನ, ಧರ್ಮ, ಆಚಾರ, ಶೀಲ ಸಾಧಿಸಿದಾತನೇ ಹಿರಿಯ ಕಾಣಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.