Index   ವಚನ - 285    Search  
 
ಶಿವ ಜಗವಾಗಲ್ಲ, ಶಿವ ಜಗವಾಗದಿರಲೂ ಬಲ್ಲ. ಶಿವ ರೂಪಾಗಬಲ್ಲ, ಶಿವ ರೂಪಾಗದಿರಲೂ ಬಲ್ಲ. ಶಿವ ಅಜಾಂಡಕೋಟಿಗಳ ಮಾಡಬಲ್ಲ, ಮಾಡದಿರಲೂ ಬಲ್ಲ. ಶಿವ ಕೆಡಿಸಬಲ್ಲ, ಕೆಡಿಸದಿರಲೂ ಬಲ್ಲ. ಶಿವ ಜಂಗಮವಾಗಿ ಪೂಜಿಸಬಲ್ಲ. ಶಿವ ಲಿಂಗವಾಗಿ ತಾನೇ ಪೂಜೆಯ ಕೊಳಲೂ ಬಲ್ಲ. ಶಿವ ಹೊರಗಾಗಿ ಮತ್ತನ್ಯವಿಲ್ಲವೆಂಬ ವೇದ ಉಂಟೇ? ಎಂದೆಡೆ ಉಂಟು. ಅಥರ್ವವೇದ: `ಶಿವೋ ಉಮಾ ಪಿತರೌʼ ಎಂದುದಾಗಿ ದೇವನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನು, ನಮಗೆಲ್ಲ ಮಾತಾಪಿತನು.