Index   ವಚನ - 300    Search  
 
ಶಿವ ಶಿವ! ಮಹಾದೇವ ಶಿವನೇ ನೀನು ಸರ್ವಜ್ಞನಾಗಿ ಎನ್ನನೂ ನೀನು ಬಲ್ಲೆ. ಈ ಪರಿಯನು ಹರಿಬ್ರಹ್ಮದೇವದಾನವಮಾನವರು ಅರಿಯದೆ ಭ್ರಮಿಸುತ್ತಮಿಪ್ಪರು. ಈ ವಿಧಿಯನು ತಾತ್ಪರ್ಯವೆಂದರಿದೆನಾಗಿ ಸದ್ಯೋನ್ಮುಕ್ತನು, ನಿರಂತರ ಪರಿಣಾಮಿ, ಪರಮಸುಖಸ್ವರೂ[ಪಿ] ನಾನೇ ಅಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.