Index   ವಚನ - 307    Search  
 
ಶೀಲ ಸಮಾನವಿಲ್ಲೆಂದು ಅಲಿಂಗವಂತರ ಮಗಳಿಗೆ ಉದ್ದೇಶದಿಂದ ಲಿಂಗಸ್ವಾಯತವ ಮಾಡಲು ಆಚಾರವಲ್ಲ. ಅದೇನು ಕಾರಣವೆಂದಡೆ, ಅದು ಶಿವಾಚಾರಕ್ಕೆ ಸಲ್ಲದಾಗಿ, ಮುಂದೆ ಗುರೂಪದೇಶಕ್ಕೆ ದೂರವಾಗಿ. ಚಿತ್ತಶುದ್ಧದಿಂದ ಸತ್ಯಸದಾಚಾರವ ಬಯಸಿ ಬಂದು ಕೇಳಿದಡೆ ತನ್ನ ಕೈಯ ಧನವ ವೆಚ್ಚಿಸಿ ಗುರುದೀಕ್ಷೆ ಲಿಂಗಸ್ವಾಯತವ ಮಾಡಿಸುವುದು ಸದಾಚಾರ. ಈ ಗುಣವುಳ್ಳಾತನೇ ಲಿಂಗದ ವರ್ಮಿಗನು, ಆತನೇ ಲಿಂಗದಾತೃ, ಆತನೇ ಲಿಂಗಸನ್ನಹಿತನಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.