Index   ವಚನ - 341    Search  
 
ಸಾಕಾರವಿಡಿದು ಅರ್ಚನೆ ಪೂಜನೆಯಂ ಮಾಡುವುದಲ್ಲದೆ ನಿರಾಕಾರವ ನಂಬಲಾಗದು. ಅಗ್ನಿಯಲ್ಲಿಹ ಗುಣವು ಪ್ರಕಾಶದಲುಂಟೆ? ಶ್ರೀಗುರು ಕರಸ್ಥಲದಲ್ಲಿ ಬಿಜಯಂಗೈಸಿ ಕೊಟ್ಟ ಇಷ್ಟಲಿಂಗವಿದ್ದ ಹಾಂಗೆ ವಜ್ರದೊಳಗೆ ಬಯಲನರಸುವರೆ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.