Index   ವಚನ - 3    Search  
 
ಉಂಡೊಡೆಯರಲ್ಲಿ ಕೊಂಬ ಪ್ರಸಾದ ಕಾರಿದಕೂಳು. ಸಣ್ಣವರಲ್ಲಿ ಕೊಂಬ ಪ್ರಸಾದ ಸಂತೆಯ ಸೂಳೆಯ ಎಂಜಲು. ಅಳಿಯನಲ್ಲಿ ಕೊಂಬ ಪ್ರಸಾದ ಅಮೇಧ್ಯ. ಮಕ್ಕಳಲ್ಲಿ ಕೊಂಬ ಪ್ರಸಾದ ಗೋಮಾಂಸ. ತಮ್ಮನಲ್ಲಿ ಕೊಂಬ ಪ್ರಸಾದ ಸಿಂಗಿ. ನಂಟರಲ್ಲಿ ಕೊಂಬ ಪ್ರಸಾದ ನರಮಾಂಸ. ವಂದಿಸಿ ನಿಂದಿಸಿ ಕೊಂಬ ಪ್ರಸಾದವ ಉರಿಲಿಂಗಪೆದ್ದಿಗಳರಸನೊಲ್ಲನವ್ವಾ.