Index   ವಚನ - 5    Search  
 
ಕೃತಯುಗ ಮೂವತ್ತೆರಡುಲಕ್ಷ ವರುಷದಲ್ಲಿ ಹೋಮವನಿಕ್ಕುವಾಗ ಕುಂಜರನೆಂಬ ಆನೆಯ ಕೊಂದು ಹೋಮವನಿಕ್ಕಿದರು ಬ್ರಾಹ್ಮಣರು. ತ್ರೇತಾಯುಗ ಹದಿನಾರುಲಕ್ಷ ವರುಷದಲ್ಲಿ ಹೋಮವನಿಕ್ಕುವಾಗ ಮಹಿಷನೆಂಬ ಕರಿ ಎಮ್ಮೆಯ ಮಗನ ಕೊಂದು ಹೋಮವನಿಕ್ಕಿದರು ಬ್ರಾಹ್ಮಣರು. ದ್ವಾಪರಯುಗ ಎಂಟುಲಕ್ಷ ವರುಷದಲ್ಲಿ ಹೋಮವನಿಕ್ಕುವಾಗ ಅಶ್ವನೆಂಬ ಕುದುರೆಯ ಕೊಂದು ಹೋಮವನಿಕ್ಕಿದರು ಬ್ರಾಹ್ಮಣರು. ಕಲಿಯುಗ ನಾಲ್ಕುಲಕ್ಷ ವರುಷದಲ್ಲಿ ಹೋಮವನಿಕ್ಕುವಾಗ ಜಾತಿಯಾಡಿನ ಮಗ ಹೋತನಕೊಂದು ಹೋಮವನಿಕ್ಕಿದರು ಬ್ರಾಹ್ಮಣರು. "ಅಣೋರಣೀಯಾನ್ ಮಹತೋ ಮಹೀಯಾನ್ " ಎಂದುದಾಗಿ, ಶಿವಭಕ್ತ ಹೊತ್ತಾರೆಯೆದ್ದು ಗುರುಲಿಂಗಜಂಗಮಕ್ಕೆ ಶರಣೆನ್ನದೆ ಮುನ್ನ ಒಂಟಿ ಬ್ರಾಹ್ಮಣನ ಕಂಡು ಶರಣಾರ್ಥಿ ಎಂದಡೆ ಎಂಬತ್ತುನಾಲ್ಕು ಲಕ್ಷ ಯೋನಿಯಲ್ಲಿ ಹಂದಿಯ ಬಸುರಲ್ಲಿ ಬಪ್ಪುದು ತಪ್ಪದು ಕಾಣಾ. ಉರಿಲಿಂಗಪೆದ್ದಿಗಳರಸ ಒಲ್ಲನವ್ವಾ.