Index   ವಚನ - 8    Search  
 
ತೂಬರದ ಕೊಳ್ಳಿಯಂತೆ ಉರಿವಾತ ಭಕ್ತನೆ? ಹುಸಿದು ತಂದು ಮಾಡುವಾತ ಭಕ್ತನೆ? ಭಕ್ತರ ಕುಲವನೆತ್ತಿ ನಿಂದಿಸುವಾತ ಭಕ್ತನೆ? 'ನಿಂದಯಾ ಶಿವಭಕ್ತಾನಾಂ ಕೋಟಿ ಜನ್ಮನಿ ಸೂಕರಃ | ಸಪ್ತಜನ್ಮನಿ ಭವೇತ್ ಕುಷ್ಠೀ ದಾಸೀಗರ್ಭೇಷು ಜಾಯತೇ ||' ಎಂದುದಾಗಿ, ತನ್ನ ಪ್ರಾಣದ ಮೇಲೆ ಬಂದಡೂ ಬರಲಿ, ಇವರ ಬಿಡಬೇಕು. ಬಿಡದಿರಲು ಉರಿಲಿಂಗಪೆದ್ದಿಗಳರಸನೊಲ್ಲನವ್ವಾ.