Index   ವಚನ - 13    Search  
 
ವಾರಣಾಸಿ, ಅವಿಮುಕ್ತಿ ಇಲ್ಲಿಯೇ ಇದ್ದಾನೆ. ಹಿಮದ ಕೇತಾರ, ವಿರೂಪಾಕ್ಷ ಇಲ್ಲಿಯೇ ಇದ್ದಾನೆ. ಗೋಕರ್ಣ, ಸೇತುರಾಮೇಶ್ವರ ಇಲ್ಲಿಯೇ ಇದ್ದಾನೆ. ಶ್ರೀಶೈಲ ಮಲ್ಲಿನಾಥ ಇಲ್ಲಿಯೇ ಇದ್ದಾನೆ. ಸಕಲಲೋಕಪುಣ್ಯಕ್ಷೇತ್ರ ಇಲ್ಲಿಯೇ ಇದ್ದಾನೆ, ಸಕಳಲಿಂಗ ಉಳಿಯುಮೇಶ್ವರ ತನ್ನಲ್ಲಿ ಇದ್ದಾನೆ.