Index   ವಚನ - 16    Search  
 
ಒಡೆಯರು ಭಕ್ತರು ತಾವೆಂದು ಅಡಿಮೆಟ್ಟಿ ಹೋಹಲ್ಲಿ ತಡೆಯಿತು ಶಕುನವೆಂದುಳಿದಡೆ, ಕಾಗೆ ವಿಹಂಗ ಮಾರ್ಜಾಲ ಮರವಕ್ಕಿ ಗರ್ದಭ ಶಶಕ ಶಂಕೆಗಳು ಮುಂತಾದ ಸಂಕಲ್ಪಕ್ಕೊಳಗಾದಲ್ಲಿ ವ್ರತಕ್ಕೆ ಭಂಗ, ಆಚಾರಕ್ಕೆ ದೂರ. ಅದೆಂತೆಂದಡೆ: ಅಂಗಕ್ಕೆ ಆಚಾರವ ಸಂಬಂಧಿಸಿ, ಮನಕ್ಕೆ ಅರಿವು-ಅರಿವಿಂಗೆ ವ್ರತವ ಮಾಡಿದಲ್ಲಿ, ಬೇರೊಂದು ಪರಿಹರಿಸುವ ನಿಮಿತ್ತವುಂಟೇ? ಇಂತೀ ಸತ್ಕ್ರಿಯಾವಂತಗೆ ಕಷ್ಟಜೀವದ ಲಕ್ಷದಲ್ಲಿ ಚಿತ್ತ ಮೆಚ್ಚಿಹನ್ನಕ್ಕ ಆತನು ಆಚಾರಭ್ರಷ್ಟ, ಏಲೇಶ್ವರಲಿಂಗಕ್ಕೆ ದೂರ.