Index   ವಚನ - 60    Search  
 
ವ್ರತಸ್ಥನಾಗಿದ್ದಾತ ಸಮೂಹಪ್ರಸಾದವ ಕೊಳಲಾಗದು. ಅದೆಂತೆಂದಡೆ: ಬಾಲರು ಭ್ರಾಮಕರು ಚೋರರು ಕಟುಕರು ಪಾರದ್ವಾರಿಗಳು ಜಾರರು ಪಗುಡಿ ಪರಿಹಾಸಕರು- ಅವರಲ್ಲಿ ಪ್ರಸಾದದ ನಚ್ಚು ಮಚ್ಚುಂಟೆ? ಪ್ರಸಾದವ ಕೊಂಬಲ್ಲಿ ಸಮಶೀಲಸಂಪನ್ನರು, ಏಕಲಿಂಗನಿಷ್ಠವಂತರು. ಸರ್ವಾಂಗಲಿಂಗಪರಿಪೂರ್ಣರು, ಪರಮನಿರ್ವಾಣಪರಿಪೂರ್ಣರು. ಇಂತೀ ಇವರೊಳಗಾದ ಸರ್ವಗುಣಸಂಪನ್ನಂಗೆ ಗಣಪ್ರಸಾದವಲ್ಲದೆ ಕಾಗೆಯಂತೆ ಕರೆದು, ಕೋಳಿಯಂತೆ ಕೂಗಿ, ಡೊಂಬರಂತೆ ಕೂಡಿ ಆಡಿ, ಭಂಗ ಹಿಂಗದಿದ್ದಡೆ ಕೊಂಡಾಡುವ ಆ ಲಾಗ ನೋಡಿಕೊಳ್ಳಿ. ನಿಮ್ಮ ಭಾವಕ್ಕೆ ನಿಮ್ಮ ಭಾವವೆ ದೃಷ್ಟಸತ್ಯ, ಮರೆಯಿಲ್ಲ, ಭಕ್ತಿಗೆ ಇದಿರೆಡೆಯಿಲ್ಲ, ವ್ರತಗೆಟ್ಟವಂಗೆ ಆಚಾರಭ್ರಷ್ಟಂಗೆ ಕಟ್ಟು ಮೆಟ್ಟ ಮಾಡಲಿಲ್ಲ. ಇದು ಕಟ್ಟಾಚಾರಿಯ ದೃಷ್ಟ, ಏಲೇಶ್ವರಲಿಂಗವು ಸರ್ವಶೀಲವಂತನಾದ ಸಂಬಂಧಸಂಪದದಂಗ.