Index   ವಚನ - 7    Search  
 
ಪೂರ್ವಕ್ಕೆ ತಾಳಾಗಿ ಉತ್ತರಕ್ಕೆ ತಲಹಾ ಬಿದ್ದ ಮರನ ತಂದು, ನಿಬದ್ಧಿಯ ಕಾರುಕನ ಕೈಯಲ್ಲಿ ಸುಬದ್ಧಿಸಿ, ಶುದ್ಧೈಸಿ ಅನಾದಿಯೆಂಬ ಹುಗಿಲುದೆಗೆದು, ಆದಿಯೆಂಬ ಈಯವನಿಕ್ಕಿ, ಇಷ್ಟವೆಂಬ ವಿಶ್ವಾಸದ ಮೇಳಿಯಂ ಬೆಟ್ಟಿ, ಭಾವವೆಂಬ ಜಿಗುಳಿಯನಿಕ್ಕಿ, ಸದ್ಭಾವವೆಂಬ ಗುಳುವ ತೊಡಿಸಿ, ಸತ್ಕ್ರಿಯೆಯೆಂಬ ಕಣ್ಣಿಯಲ್ಲಿ ನೇಗಿಲ ತೊಡಚಿ, ಜ್ಞಾನಚಕ್ಷುವೆಂಬ ನೊಗದ ಉಭಯದ ಕೊನೆಯಲ್ಲಿ ಎಡಗೋಲಿನಲ್ಲಿ ಕಾರಿಯ ಹೂಡಿ, ಬಲಗೋಲಿನಲ್ಲಿ ಬೆಳ್ಳಿಯ ಹೂಡಿ, ಅಡಿ ಕೆತ್ತುವಂತೆ ಧಾಯೆಂದು ಹೊಡೆಯಲಾಗಿ, ಭೂಮಿಯೊಡಗೂಡಿ ಸವೆಯಿತ್ತು. ಬಿತ್ತವಟ್ಟಕ್ಕೆ ದಿಕ್ಕಿಲ್ಲ, ಕಾಮಭೀಮ ಜೀವಧನದೊಡೆಯ ನೀನೆ ಬಲ್ಲೆ.