Index   ವಚನ - 2    Search  
 
ಎಲ್ಲರ ಗಂಡಂದಿರು ಪರದಳವಿಭಾಡರು; ಎನ್ನ ಗಂಡ ಮನದಳ ವಿಭಾಡ. ಎಲ್ಲರ ಗಂಡಂದಿರು ಗಜವೇಂಟೆಕಾರರು; ಎನ್ನ ಗಂಡ ಮನವೇಂಟೆಕಾರ. ಎಲ್ಲರ ಗಂಡಂದಿರು ತಂದಿಕ್ಕಿಸಿಕೊಂಬರು; ಎನ್ನ ಗಂಡ ತಾರದೆ ಇಕ್ಕಿಸಿಕೊಂಬ. ಎಲ್ಲರ ಗಂಡಂದಿರಿಗೆ ಮೂರು, ಎನ್ನ ಗಂಡಂಗೆ ಅದೊಂದೆ ಅದೊಂದೂ ಸಂದೇಹ, ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.