Index   ವಚನ - 4    Search  
 
ನಾ ತಿರುಹುವ ರಾಟೆಯ ಕುಲಜಾತಿಯ ಕೇಳಿರಣ್ಣಾ ಅಡಿಯ ಹಲಗೆ ಬ್ರಹ್ಮ, ತೋರಣ ವಿಷ್ಣು, ನಿಂದ ಬೊಂಬೆ ಮಹಾರುದ್ರ; ರುದ್ರನ ಬೆಂಬಳಿಯವೆರಡು ಸೂತ್ರಕರ್ಣ. ಅರಿವೆಂಬ ಕದಿರು, ಭಕ್ತಿಯೆಂಬ ಕೈಯಲ್ಲಿ ತಿರುಹಲಾಗಿ, ಸುತ್ತಿತ್ತು ನೂಲು ಕದಿರು ತುಂಬಿತ್ತು. ರಾಟೆಯ ತಿರುಹಲಾರೆ- ಎನ್ನ ಗಂಡ ಕುಟ್ಟಿಹ ಇನ್ನೇವೆ ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.