Index   ವಚನ - 10    Search  
 
ಹಿಡಿಯಿಲ್ಲದ ಶಸ್ತ್ರ, ಕೀಲಿಲ್ಲದ ಕತ್ತರಿ ಉಭಯ ಒಡಗೂಡದ ಚಿಮ್ಮುಟ, ರೂಹಿಲ್ಲದ ಚಣ ಹಲ್ಲಿಲ್ಲದ ಹಣಿಗೆ, ಮಲವಿಲ್ಲದ ಬೆಳಗಿನ ಮುಕುರವ ಹಿಡಿದು ಶರಣರೆಲ್ಲರ ಅಡಿವಿಡಿದಾಡ ಬಂದೆ. ಚೆನ್ನಬಸವಣ್ಣಂಗೆ ಭೃತ್ಯನಾಗಿ, ಶರಣತತಿಗೆ ಲೆಂಕನಾಗಿ ಸತ್ಯ ಗುರುಚರದ ಕರ್ತೃಸ್ವರೂಪಕ್ಕೆ ಡಿಂಗರಿಗ ಉಭಯ ಡಿಂಗರಿಗರ ಪ್ರತಿ ಡಿಂಗರಿಗರ ಕಂದನೆಂದು ಪ್ರತಿಪಾಲಿಸಿಕೋ ಚೆನ್ನಬಸವಣ್ಣಪ್ರಿಯ ಕಮಳೇಶ್ವರಲಿಂಗಾ.