Index   ವಚನ - 1    Search  
 
ಅಂತರಂಗದಲ್ಲಿ ಅರಿವಿಲ್ಲದವಂಗೆ ಬಹಿರಂಗದಲ್ಲಿ ಕ್ರೀಯಿದ್ದು ಫಲವೇನು? ಅದು ಕಣ್ಣಿಲ್ಲದವನ ಬಾಳುವೆಯಂತೆ. ಬಹಿರಂಗದಲ್ಲಿ ಕ್ರೀಯಿಲ್ಲದವಂಗೆ ಅಂತರಂಗದಲ್ಲಿ ಅರಿವಿದ್ದು ಫಲವೇನು? ಅದು ಶೂನ್ಯಾಲಯದ ದೀಪದಂತೆ. ಅಂತರಂಗದ ಅರಿವು, ಬಹಿರಂಗದ ಕ್ರಿಯೆ- ಈ ಉಭಯಾಂಗವೊಂದಾಗಬೇಕು. ಅದೆಂತೆಂದಡೆ : 'ಅಂತರ್ ಜ್ಞಾನ ಬಹಿಃಕ್ರಿಯಾ ಏಕೀಭಾವೋ ವಿಶೇಷತಃ' ಎಂದುದಾಗಿ, ಅಂತರಂಗದಲ್ಲಿ ಅರಿವು, ಬಹಿರಂಗದಲ್ಲಿ ಕ್ರೀಯುಳ್ಳ ಮಹಾತ್ಮನೆ ಭಕ್ತನಪ್ಪ, ಮಹೇಶ್ವರನಪ್ಪ, ಪ್ರಸಾದಿಯಪ್ಪ, ಪ್ರಾಣಲಿಂಗಿಯಪ್ಪ, ಶರಣನೈಕ್ಯನಪ್ಪ. ನಮ್ಮ ಪರಮಗುರು ಶಾಂತಮಲ್ಲಿಕಾರ್ಜುನ ತಾನೆಯಪ್ಪ.