ಬೇಡಲೇತಕ್ಕೆ ಕಾಯಕವ ಮಾಡಿಹೆನೆಂದು?
ಕೊಡದಡೆ ಒಡಗೂಡಿ ಬಯ್ಯಲೇತಕ್ಕೆ?
ಒಡೆಯರು ಭಕ್ತರಿಗೆ ಮಾಡಿಹೆನೆಂದು
ಗಡಿತಡಿಗಳಲ್ಲಿ ಕವಾಟ ಮಂದಿರ ಮುಂದೆ ಗೊಂದಿಗಳಲ್ಲಿ
ನಿಂದು ಕಾಯಲೇತಕ್ಕೆ?
ಈ ಗುಣ ಕಾಯಕದಂದವೆ?
ಈ ಗುಣ ಹೊಟ್ಟೆಗೆ ಕಾಣದ ಸಂಸಾರದ ಘಟ್ಟದ ನಿಲುವು.
ಉಭಯ ಭ್ರಷ್ಟಂಗೆ ಕೊಟ್ಟ ದ್ರವ್ಯ
ಮೇಖಲೇಶ್ವರಲಿಂಗಕ್ಕೆ ಮುಟ್ಟದೆ ಹೋಯಿತ್ತು.