Index   ವಚನ - 3    Search  
 
ಹಂಸಪತಿ ಗರುಡಪತಿ ವೃಷಭಪತಿ ಮೊದಲಾದ ಸರ್ವಜೀವಾಧಿಪತಿ ದೇವರಾಯ ಮಹಾರಾಯನ ಅರಸುತನ ಹೊಸತು: ಓಲಗಕ್ಕೆ ಬಾರ, ಸಿಂಹಾಸನದಲ್ಲಿ ಕುಳ್ಳಿರ, ಸ್ತ್ರೀಲಂಪಟನಾಗಿ ಅಂತಃಪುರವ ಬಿಟ್ಟು ಹೊರವಂಡ. ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ, ಗುರುವೆಂಬ ತಳವಾರನ ಆಜ್ಞೆ ಕೆಟ್ಟಿತ್ತು, ತೆರೆದ ಬಾಗಿಲ ಮುಚ್ಚುವರಿಲ್ಲ, ಮುಚ್ಚಿದ ಬಾಗಿಲ ತೆರೆವವರಿಲ್ಲ. ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು, ಭಕ್ತರೆಂಬವರಿನ್ನು ಬದುಕಲೇಬಾರದು.