ದೀಕ್ಷೋಪದೇಶವ ಮಾಡಿ ಗುರುವಿನ
ಕಣ್ಣ ಕಳೆದು ತಲೆ ಹೊಡೆದು ಮೂರು ಹಣವ ಕೊಂಡೆ.
ದೀಕ್ಷೋಪದೇಶವ ಹಡೆದ ಭಕ್ತರ ನಾಲಗೆಯ ಕೊಯ್ದು
ಕೈ ಮುರಿದು ಮೂರು ಹಣವ ಕೊಂಡೆ.
ಈ ಗುರುಶಿಷ್ಯರುಭಯರ ಸಂಯೋಗಕಾಲದಲ್ಲಿರುವ
ಸಾಕ್ಷಿಗಣಂಗಳ ಮನೆಯ ಸುಟ್ಟು ಮೂರು ರತ್ನವ ಕೊಂಡೆ.
ಇಂತೀ ಮೂವರ ಹಣವ ತಂದು ಗುರುವಿಗೆ ಕೊಟ್ಟು
ಕಾಯಕವ ಮಾಡುತ್ತಿರ್ದೆನಯ್ಯ
ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ
ನಿರ್ಮಾಯಪ್ರಭುವೆ.