Index   ವಚನ - 135    Search  
 
ಕಲ್ಲು ದೇವರೆಂದು ಪೂಜಿಸುವರೆಲ್ಲ ಕಲ್ಲಾಗಿ ಪುಟ್ಟುವರು. ಕಟ್ಟಿಗೆ ದೇವರೆಂದು ಪೂಜಿಸುವರೆಲ್ಲ ಕಟ್ಟಿಗೆಯಾಗಿ ಪುಟ್ಟುವರು. ಮಣ್ಣುದೇವರೆಂದು ಪೂಜಿಸುವರೆಲ್ಲ ಮಣ್ಣಾಗಿ ಪುಟ್ಟುವರು. ನೀರು ದೇವರೆಂದು ಪೂಜಿಸುವರೆಲ್ಲ ನೀರಾಗಿ ಪುಟ್ಟುವರು. ಅಗ್ನಿದೇವರೆಂದು ಪೂಜಿಸುವರೆಲ್ಲರು ಅಗ್ನಿಯಾಗಿ ಪುಟ್ಟುವರು. ಇದಕ್ಕೆ ದೃಷ್ಟಾಂತ: 'ಯದ್ದೃಷ್ಟಂ ತನ್ನಷ್ಟಂ ಯಥಾಭಾವಸ್ತಥಾ ಸಿದ್ಧಿಃ' ಎಂದುದಾಗಿ, ಇಂತಿವರೆಲ್ಲರು ದೇವರೆಂದು ಪೂಜಿಸುವರು ಹುಟ್ಟುಕುರುಡನು ಬೆಣ್ಣೆಯೆಂದು ನರಕವ ಭುಂಜಿಸಿದಂತಾಯಿತ್ತಯ್ಯಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.