Index   ವಚನ - 165    Search  
 
ಅಂಗದ ಮೇಲೆ ಇಷ್ಟಲಿಂಗವ ಧರಿಸಿ ಪೂಜೋಪಚಾರವ ಮಾಡುವವರು ಲಿಂಗಪ್ರಾಣಿಗಳಲ್ಲ. ಎನ್ನ ಗುರುವೆಂದು ಭಾವಿಸಿ ಶರಣೆಂದು ನಮಸ್ಕಾರ ಮಾಡುವವರು ಲಿಂಗಪ್ರಾಣಿಗಳಲ್ಲ. ಜಂಗಮವೆಂದು ನಂಬಿ, ವಿಶ್ವಾಸ ಬಲಿದು, ಪಾದಪೂಜೆಯ ಮಾಡಿ ಪಾದೋದಕ ಪ್ರಸಾದವ ಕೊಂಬುವವರು ಲಿಂಗಪ್ರಾಣಿಗಳಲ್ಲ. ಇಂತೀ ತ್ರಿಮೂರ್ತಿಗಳ ಪೂಜೆಯನ್ನು ಬಿಟ್ಟುಬಿಡದೆ ಪಿಡಿದು ಪೂಜಿಸುವವರು ಪ್ರಾಣಲಿಂಗಿಗಳೆಂಬೆನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.